ADVERTISEMENT

ಶುಲ್ಕ ಪಾವತಿಗೆ ಒತ್ತಡ ಬೇಡ: ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 4:05 IST
Last Updated 11 ಜೂನ್ 2021, 4:05 IST
ಡಾ.ಕೆ.ವಿ. ರಾಜೇಂದ್ರ
ಡಾ.ಕೆ.ವಿ. ರಾಜೇಂದ್ರ   

ಮಂಗಳೂರು: ಕೋವಿಡ್–19 ಸಂಕಷ್ಟದ ಸಂದರ್ಭದಲ್ಲಿ ಶುಲ್ಕ ಪಾವತಿಸುವಂತೆ ಖಾಸಗಿ ಶಾಲಾ, ಕಾಲೇಜುಗಳು ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ಈ ಸೂಚನೆಯ ನಂತರವೂ ಶುಲ್ಕ ಪಾವತಿಗೆ ಒತ್ತಾಯಿಸಿದ ದೂರುಗಳು ಬಂದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ತೆರೆಯುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆದರೆ, ಕೆಲ ಖಾಸಗಿ ಶಾಲೆ–ಕಾಲೇಜಿನವರು ಶಾಲೆಗೆ ಬರಲು ತಿಳಿಸುತ್ತಿರುವುದಾಗಿ ಪೋಷಕರು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು, ಪೋಷಕರನ್ನು ಶಾಲೆಗೆ ಕರೆಯಿಸಿ, ಲೇಖನ ಸಾಮಗ್ರಿಗಳನ್ನು ನಿರ್ದಿಷ್ಟ ಅಂಗಡಿಯಲ್ಲೇ ಖರೀದಿ ಮಾಡುವಂತೆ ಒತ್ತಾಯ ಮಾಡುತ್ತಿರುವುದಾಗಿಯೂ ದೂರುಗಳು ಬಂದಿವೆ ಎಂದು ತಿಳಿಸಿದ್ದಾರೆ.

ADVERTISEMENT

ಕೋವಿಡ್–19 ಸಂಕಷ್ಟದ ಸಮಯದಲ್ಲಿ ಮಕ್ಕಳ ಪೋಷಕರು ಕೆಲಸವಿಲ್ಲದೇ ಶಿಕ್ಷಣವನ್ನು ಮುಂದುವರಿಸಲು ಕಷ್ಟಪಡುತ್ತಿರುವುದು ಎಲ್ಲರ ಗಮನಕ್ಕೆ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಶಿಕ್ಷಣ ಸಂಸ್ಥೆಗಳು ಈ ರೀತಿಯ ಒತ್ತಡ ಹೇರಬಾರದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.