ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲ. ಬಿಸಿಲಿನ ಝಳಕ್ಕೆ ನೀರಿನ ಮಟ್ಟ ಕಡಿಮೆ ಆಗುತ್ತಿರುವುದರಿಂದ ಸಾರ್ವಜನಿಕರು ಮಿತವಾಗಿ ನೀರನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಉಳ್ಳಾಲ, ಬಜಪೆ, ಕೋಟೆಕಾರು ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಇಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಇದನ್ನು ಹೊರತುಪಡಿಸಿ, ಇನ್ನೆಲ್ಲಿಯೂ ನೀರಿನ ಸಮಸ್ಯೆ ಎದುರಾಗಿಲ್ಲ. ಮಂಗಳೂರು ನಗರದಲ್ಲಿ ಸದ್ಯಕ್ಕೆ ನೀರಿನ ರೇಷನಿಂಗ್ ಮಾಡುವ ಸಂದರ್ಭ ಇಲ್ಲ. ಎಎಂಆರ್ ಅಣೆಕಟ್ಟೆಯಲ್ಲಿ ಕಳೆದ ವರ್ಷ ಈ ಅವಧಿಗಿಂತ ನೀರಿನ ಮಟ್ಟ ತುಸು ಇಳಿಕೆಯಾಗಿದೆ. ಸುತ್ತಲಿನ ಕೃಷಿ ಭೂಮಿಗೆ ನೀರು ಬಳಸದಂತೆ ಸೂಚನೆ ನೀಡಲಾಗಿದೆ’ ಎಂದರು.
ನೀರಿನ ಪ್ರಮಾಣ ಗಮನಿಸಿ ಕೈಗಾರಿಕೆಗೆ ನೀರು ಬಳಕೆಗೆ ಮಿತಿ ಹಾಕಲಾಗುವುದು. ಸಾರ್ವಜನಿಕರು ಸ್ವಯಂ ಜಾಗೃತರಾಗಿ ನೀರನ್ನು ಬಳಕೆ ಮಾಡಬೇಕು. ವಾಹನ ತೊಳೆಯುವ ಅಥವಾ ಇನ್ನಾವುದೇ ಉದ್ದೇಶಕ್ಕೆ ನೀರಿನ್ನು ಪೋಲು ಮಾಡಬಾರದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.