ADVERTISEMENT

ಪುತ್ತೂರು-ಮಂಗಳೂರು ನಾನ್‌ಸ್ಟಾಪ್‌ ಬಸ್ ಸಂಚಾರ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 7:40 IST
Last Updated 14 ಜುಲೈ 2025, 7:40 IST
ಮಂಗಳೂರು ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ
ಮಂಗಳೂರು ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ   

ಪುತ್ತೂರು: ಕೆಎಸ್‌ಆರ್‌ಟಿಸಿ ವತಿಯಿಂದ ಪುತ್ತೂರು-ಮಂಗಳೂರು ನಾನ್‌ಸ್ಟಾಪ್ ಎಕ್ಸ್‌ಪ್ರೆಸ್‌ ಬಸ್ ಸಂಚಾರ ಸೋಮವಾರ (ಜು.14) ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್‌ ಎಲ್ಲೂ ನಿಲುಗಡೆ ಇಲ್ಲದೆ ನೇರವಾಗಿ ಸ್ಟೇಟ್‌ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಗಂಟೆಗೆ ಒಂದು ಬಸ್ ಹೊರಡಲಿದೆ. ಮಹಿಳೆಯರು ಈ ಬಸ್ಸಿನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ. ಪ್ರಯಾಣಿಕರೆಲ್ಲರೂ ಈ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಸರ್ಕಾರದ ಈ ಬಸ್ ವ್ಯವಸ್ಥೆಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT