ADVERTISEMENT

ಎನ್‌ಎಸ್‌ಜಿ ಕಮಾಂಡೊಗಳಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ತನಿಖೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 7:00 IST
Last Updated 21 ಜನವರಿ 2020, 7:00 IST
ಮಂಗಳೂರು ವಿಮಾನ ನಿಲ್ದಾಣ
ಮಂಗಳೂರು ವಿಮಾನ ನಿಲ್ದಾಣ   

ಮಂಗಳೂರು:ಇಲ್ಲಿನ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾದ ಪ್ರಕರಣದ ತನಿಖೆಗೆ ರಾಷ್ಟ್ರೀಯ ಭದ್ರತಾ ದಳದ (ಎನ್ಎಸ್‌ಜಿ) ತಂಡ ಮಂಗಳವಾರ ಬಂದಿದೆ.

ಬೆಂಗಳೂರಿನಿಂದ 16 ಜನರ ತಂಡ ಮಂಗಳವಾರ ಬೆಳಿಗ್ಗೆ ಬಂದಿದ್ದು, ಬಾಂಬ್ ಪತ್ತೆಯಾದ ಸ್ಥಳದ ಪರಿಶೀಲನೆ ನಡೆಸುತ್ತಿದೆ. ಎನ್ಎಸ್‌ಜಿಯ 27ನೇ ಬೆಟಾಲಿಯನ್‌ನ ತಂಡ ಇದು ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದೆ. ಈ ತಂಡ ಬಾಂಬ್ ನಾಶಪಡಿಸಿದ ಸ್ಥಳದಲ್ಲಿ ಮಾದರಿಗಳನ್ನೂ ಸಂಗ್ರಹಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ADVERTISEMENT

ಎನ್ಐಎ ತಂಡ‌ ದೌಡು: ಬಾಂಬ್ ಸ್ಫೋಟಿಸಲು ಯತ್ನಿಸಿದ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್ಐಎ) ವರ್ಗಾವಣೆ ಆಗುವ ಸಾಧ್ಯತೆ ಇದೆ. ಎನ್ಐಎ ಅಧಿಕಾರಿಗಳ ತಂಡವೂ ಮಂಗಳೂರಿಗೆ ದೌಡಾಯಿಸಿದೆ.

ಎನ್ಐಎ ಅಧಿಕಾರಿಗಳು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.