ADVERTISEMENT

ಪ್ರಬುದ್ಧವಾಗಿ ರೂಪಿಸುವ ಎನ್‌ಎಸ್‌ಎಸ್‌

ನಾರಾವಿ ಪ್ರೌಢಶಾಲೆಯಲ್ಲಿ ಗುರುದೇವ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 5:23 IST
Last Updated 28 ಸೆಪ್ಟೆಂಬರ್ 2025, 5:23 IST
ಗುರುದೇವ ಕಾಲೇಜಿನ ಎನ್‌ಎಸ್‌ಎಸ್‌ ಚಟುವಟಿಕೆಯನ್ನು ಮರೋಡಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು
ಗುರುದೇವ ಕಾಲೇಜಿನ ಎನ್‌ಎಸ್‌ಎಸ್‌ ಚಟುವಟಿಕೆಯನ್ನು ಮರೋಡಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು   

ಬೆಳ್ತಂಗಡಿ: ‘ರಾಷ್ಟ್ರೀಯ ಸೇವಾ ಯೋಜನೆಯು ಬದುಕನ್ನು ಪ್ರಬುದ್ಧವಾಗಿ ರೂಪಿಸುವ ಜತೆಗೆ ರಾಷ್ಟ್ರನಿರ್ಮಾಣದಲ್ಲಿ ದೊಡ್ಡ ಕೊಡುಗೆ ನೀಡುತ್ತಿದೆ. ವಿದ್ಯಾರ್ಥಿಗಳು ಈ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಬದುಕನ್ನು ಬೆಳಗಿಸಿಕೊಳ್ಳಬೇಕು’ ಎಂದು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹೇಳಿದರು.

ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದು ಸಂಸ್ಕಾರಯುತ ಜೀವನಶೈಲಿ ದೂರವಾಗಿದೆ. ಪ್ರತಿಯೊಂದನ್ನೂ ವ್ಯಾವಹಾರಿಕವಾಗಿ ನೋಡುವ ದೃಷ್ಟಿಕೋನ ನಮ್ಮದಾಗಿದೆ. ಹಾಗಾಗಿಯೇ ಇಂದು ಮನುಷ್ಯತ್ವ, ಮಾನವೀಯತೆ ನಮ್ಮಿಂದ ದೂರವಾಗಿದೆ. ಸಂಸ್ಕಾರ ನೀಡುವ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಬದುಕು ಅರ್ಥವತ್ತಾಗುತ್ತದೆ’ ಎಂದರು.

ADVERTISEMENT

ಪಿಡಬ್ಲ್ಯೂಡಿ ಗುತ್ತಿಗೆದಾರರ ತಾಲ್ಲೂಕು ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ, ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಮಾತನಾಡಿದರು.

ಗುರುದೇವ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷೆ ಪ್ರಿತಿತ ಧರ್ಮ ವಿಜೇತ್ ಅಧ್ಯಕ್ಷತೆ ವಹಿಸಿದ್ದರು.

ವಿಶ್ವ ಹಿಂದೂ ಪರಿಷತ್ ನಾರಾವಿ ಘಟಕದ ಅಧ್ಯಕ್ಷ ಮುರಾರಿ ರಾವ್, ನಾರಾವಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸುಶೀಲ, ಜನ ಸೇವಾ ಟ್ರಸ್ಟ್ ನಾರಾವಿಯ ಅಧ್ಯಕ್ಷ ಅಭಿಜಿತ್ ಜೈನ್ ಶುಭ ಮಾತನಾಡಿದರು.

ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಸುಗಮ ಕಾಂಪ್ಲೆಕ್ಸ್ ಮಾಲೀಕ ಪ್ರಕಾಶ್ ಜೈನ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಶ್ ಪೂಜಾರಿ, ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಸವಿತಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ., ಕಾಲೇಜಿನ ಎನ್.ಎಸ್.ಎಸ್.ಘಟಕದ ನಾಯಕ ಮಹಮ್ಮದ್ ಜುನೈದ್, ನಾಯಕಿ ಸಂಧ್ಯಾ, ಸಹ ಕಾರ್ಯಕ್ರಮಾಧಿಕಾರಿ ಚಂದನಾ ಭಾಗವಹಿಸಿದ್ದರು.

ಉಪ ಪ್ರಾಂಶುಪಾಲ ಬಿ.ಎ.ಶಮೀವುಲ್ಲಾ ಪ್ರಸ್ತಾವಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ, ಶಿಬಿರಾಧಿಕಾರಿ ಗಣೇಶ್ ಬಿ.ಶಿರ್ಲಾಲು ಸ್ವಾಗತಿಸಿದರು. ಸುಷ್ಮಾ ವಂದಿಸಿದರು. ಸಹ ಶಿಬಿರಾಧಿಕಾರಿಗಳಾದ ಸೌಜನ್ಯ, ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.