ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ಶಿವರಾಮ ಕಾರಂತ ಪ್ರಶಸ್ತಿಗೆ ಹಿರಿಯ ಲೇಖಕ ಪ್ರೊ.ಎನ್.ಟಿ.ಭಟ್, ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಮತ್ತು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ಪ್ರಮಾಣಪತ್ರ, ತಲಾ ₹ 20 ಸಾವಿರ ನಗದು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಮಾವಿನಕುಳಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.