ಮಂಗಳೂರು: ದಡ್ಡಲ್ ಕಾಡ್ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ, ಕಾಂಡೋಮ್ ಪತ್ತೆಯಾಗಿವೆ.
ಸ್ಥಳದಲ್ಲಿ ಭಕ್ತರು ಜಮಾಯಿಸಿದ್ದು, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆಯೂ ಮೂರು ಕಡೆಗಳಲ್ಲಿ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ ಹಾಕಲಾಗಿತ್ತು.
ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುವುದು. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.