ADVERTISEMENT

ಉಳ್ಳಾಲ: ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2022, 5:25 IST
Last Updated 27 ಡಿಸೆಂಬರ್ 2022, 5:25 IST
ನೂತನವಾಗಿ ಅಸ್ತಿತ್ವಕ್ಕೆ ಬಂದ ಉಳ್ಳಾಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ನೂತನವಾಗಿ ಅಸ್ತಿತ್ವಕ್ಕೆ ಬಂದ ಉಳ್ಳಾಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು.   

ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಸಂತ ಕೊಣಾಜೆ, ಉಪಾಧ್ಯಕ್ಷರಾಗಿ ದಿನೇಶ್, ಆರಿಫ್ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಪೊಯ್ಯತ್ತಬೈಲ್, ಕಾರ್ಯದರ್ಶಿಯಾಗಿ ಸತೀಶ್ ಕೊಣಾಜೆ, ವಜ್ರೇಶ್ವರಿ, ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಸಾದ್ ಸುವರ್ಣ, ಶ್ವೇತಾ, ಶಿವಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪುಷ್ಪರಾಜ್ ಬಿ.ಎನ್. ನೂತನ ಪದಾಧಿಕಾರಿಗಳ ಹೆಸರು ಘೋಷಣೆ ಮಾಡಿದರು. ಉಪ ಚುನಾವಣಾಧಿಕಾರಿ ರಾಜೇಶ್ ದಡ್ಡಂಗಡಿ, ಸಹಾಯಕ ಚುನಾವಣಾಧಿಕಾರಿ ಭರತ್ ರಾಜ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ್ ಕುತ್ತಾರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ, ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.