ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ನೆಕ್ಕಿಲಾಡಿ ಬೋಳಂತಿಲದ ಎಂಆರ್‌ಎಲ್ ಪೆಟ್ರೋಲ್ ಬಂಕ್ ಬಳಿ ಆಮ್ನಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಗಾಯಗೊಂಡಿದ್ದಾರೆ.
ಬೈಕ್ ಚಲಾಯಿಸುತ್ತಿದ್ದ ನಿವೃತ್ತ ಸೈನಿಕ, ಪ್ರಸ್ತುತ ಕೆನರಾ ಬ್ಯಾಂಕ್ ಸಿಬ್ಬಂದಿ ಜನಾರ್ದನ ಘಟನೆಯಲ್ಲಿ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಆಮ್ನಿ ಡಿಕ್ಕಿ ಹೊಡೆದಿದೆ. ಆಮ್ನಿ ಚಾಲಕ ಅಕ್ಬರ್ ಅಲಿ ವಿರುದ್ಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.