ADVERTISEMENT

ಉತ್ತರ ಕನ್ನಡ| ಮಂಗನ ಕಾಯಿಲೆಗೆ ಮೊದಲ ಬಲಿ; ಮತ್ತೊಬ್ಬರಲ್ಲಿ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 4:31 IST
Last Updated 29 ಫೆಬ್ರುವರಿ 2020, 4:31 IST
–ಪ್ರಜಾವಾಣಿ ಚಿತ್ರ
–ಪ್ರಜಾವಾಣಿ ಚಿತ್ರ   

ಸಿದ್ದಾಪುರ:ತೀವ್ರ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಭಾಸ್ಕರ‌ ಹೆಗಡೆ ಎಂಬುವವರುಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಅವರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಹೊನ್ನೇಘಟಗಿ ಸಮೀಪದ ಮಳಗುಳಿಯ 64 ವರ್ಷ ವಯಸ್ಸಿನ ಇವರು ಕಳೆದ 10 ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಯಿಂದ ಮಣಿಪಾಲ ಆಸ್ಪತ್ರೆ ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ‌

ಈ ವರ್ಷ ಮಂಗನ ಕಾಯಿಲೆಯಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ. ಈ‌ಭಾಗದ ಮತ್ತೊಬ್ಬ ಮಹಿಳೆಯಲ್ಲಿ ಕೂಡ ಮಂಗನ ಕಾಯಿಲೆ ವೈರಾಣು ದೃಢ ಪಟ್ಟಿದ್ದು,ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT