ಉರುಳಿ ಬಿದ್ದಿರುವ ಲಾರಿ
ಬಂಟ್ವಾಳ (ದಕ್ಷಿಣ ಕನ್ನಡ): ಇಲ್ಲಿನ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ತಿರುವು ರಸ್ತೆಯಲ್ಲಿ ಶುಕ್ರವಾರ ಶಾಮಿಯಾನ ಸಾಗಿಸುತ್ತಿದ್ದ ಲಾರಿಯೊಂದು ಉರುಳಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತಪಟ್ಟವರು. ಗಾಯಗೊಂಡವರ ಹೆಸರು ಇನ್ನೂ ಲಭ್ಯವಾಗಿಲ್ಲ.
ವಗ್ಗ ಸಮೀಪದ ಮಧ್ವ ಎಂಬಲ್ಲಿಂದ ಶಾಮಿಯಾನ ಮತ್ತಿತರ ಸಾಮಗ್ರಿ ಹೇರಿಕೊಂಡು ಪುಂಜಾಲಕಟ್ಟೆ ಕಡೆಗೆ ಲಾರಿ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಗಾಯಾಳುಗಳಿಗೆ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಲಾರಿಯಡಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆಯುವಲ್ಲಿ ಸ್ಥಳೀಯರು ಶ್ರಮಿಸಿದರು ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.