ಉಜಿರೆ: ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ಮಾರ್ಗದರ್ಶನದಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಯಶಸ್ವಿಯಾದ ಸಂಬಂಧ ಸೈನಿಕರನ್ನು ಅಭಿನಂದಿಸಿ, ಯಶಸ್ಸನ್ನು ಕೋರಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.
ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ, ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಡೆ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಪ್ರಾರ್ಥಿಸಿದರು.
ಪೆರಾಡಿ ಬಸದಿಯಲ್ಲಿ ಪ್ರತಿಷ್ಠಾ ಮಹೋತ್ಸವ
ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಗ್ರಾಮದ ಪೆರಾಡಿಯಲ್ಲಿರುವ ಬೆಳ್ಳಿಬೀಡು ಭಗವಾನ್ ಪಾರ್ಶ್ವನಾಥ ಸ್ವಾಮಿ, ಪದ್ಮಾವತಿ ಅಮ್ಮನವರ ಬಸದಿಯಲ್ಲಿ ಧಾಮಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಗುರುವಾರ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಬಳಿಕ ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶಾಭಿಷೇಕ ನಡೆಯಿತು.
ಬೆಳ್ಳಿಬೀಡು ಕೆ.ಹೇಮರಾಜ್, ಧಾರವಾಡದ ಸುಮನಾ ವಜ್ರಕುಮಾರ್, ಸುಜಾತಾ ಡಿ.ಪತ್ರಾವಳಿ, ಸ್ಮಿತೇಶ್ ಪತ್ರಾವಳಿ ಸೇವಾಕರ್ತೃಗಳಾಗಿ ಸಹಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.