ಪಾಕ್ ವಿರುದ್ಧ 'ಆಪರೇಷನ್ ಸಿಂಧೂರ' ಯಶಸ್ವಿ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ವಿಜಯೋತ್ಸವ ಆಚರಿಸಿದರು.
ಪ್ರಜಾವಾಣಿ ಚಿತ್ರ
ಮಂಗಳೂರು: ‘ಆಪರಷನ್ ಸಿಂಧೂರ’ ಕಾರ್ಯಾಚರಣೆ ಮೂಲಕಪಾಕಿಸ್ತಾನದಲ್ಲಿರುವ ಉಗ್ರಗಾಮಿಗಳ ಅಡಗುದಾಣ ಹಾಗೂ ತರಬೇತಿ ಕೇಂದ್ರಗಳಿಗೆ ದಾಳಿ ನಡೆಸಿದ ಸೈನಿಕರಿಗೆ ವಿವಿಧ ಸಂಸ್ಥೆಗಳು, ಸಾರ್ವಜನಿಕರು, ರಾಜಕೀಯ ಮುಖಂಡರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಎನ್‌ಎಸ್‌ಯುಐ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುಹನ್ ಆಳ್ವ ಮತ್ತಿತರರು ಭಾಗವಹಿಸಿದರು.
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಸಂಭ್ರಮಿಸಲು ‘ಹಾಲು ಪಾಯಸ ಪೇರ್ ಪರಮಾನ್ನ’ವನ್ನು ಹಂಚಲಾಯಿತು.
ಈ ಕಾರ್ಯಾಚರಣೆ ಮೂಲಕ ಸೈನಿಕರು ತೋರಿದ ಶೌರ್ಯಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಸತೀಶ್ ಕುಂಪಲ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.