ADVERTISEMENT

ಪೊಳಲಿ: ‘ನಮ್ಮೂರು ನಮ್ಮ ಕೆರೆ’ ಹಸ್ತಾಂತರ ನಾಳೆ

​ಪ್ರಜಾವಾಣಿ ವಾರ್ತೆ
Published 7 ಮೇ 2025, 13:46 IST
Last Updated 7 ಮೇ 2025, 13:46 IST
ಪೊಳಲಿ ಸಮೀಪದ ಕೆರೆದಬಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃದ್ಧಿಗೊಂಡ ಕೆರೆ
ಪೊಳಲಿ ಸಮೀಪದ ಕೆರೆದಬಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃದ್ಧಿಗೊಂಡ ಕೆರೆ   

ಬಂಟ್ವಾಳ: ಇಲ್ಲಿನ ಪೊಳಲಿ ಸಮೀಪದ ಕೆರೆದಬಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃದ್ಧಿಪಡಿಸಿದ 586ನೇ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ₹ 10 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕೆರೆ ಇದೇ 8ರಂದು ಬೆಳಿಗ್ಗೆ ಸ್ಥಳೀಯ ಕರಿಯಂಗಳ ಗ್ರಾಮ ಪಂಚಾಯಿತಿಗೆ ಹಸ್ತಾಂತರಗೊಳ್ಳಲಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಕರಿಯಂಗಳ ಗ್ರಾಮ ಪಂಚಾಯಿತಿ ಹಾಗೂ ಪೊಳಲಿ ಕೆರೆ ಅಭಿವೃದ್ಧಿ ಸಮಿತಿ ಸಹಭಾಗಿತ್ವದಲ್ಲಿ ಕೆರೆ ಪುನರ್ನಿರ್ಮಾಣಗೊಂಡಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ದಂಪತಿ ಕೆರೆ ಹಸ್ತಾಂತರಿಸುವರು ಎಂದು ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ತಿಳಿಸಿದ್ದಾರೆ.

ಒಟ್ಟು 7 ಎಕರೆ ಜಮೀನು ಮೀಸಲಿರಿಸಿದ್ದು 5 ಎಕರೆ ಪ್ರದೇಶದಲ್ಲಿ ಕೆರೆ ಇದೆ. ಇದರಿಂದಾಗಿ ಸ್ಥಳೀಯ ಕೃಷಿಕರಿಗೆ ಅನುಕೂಲಕರವಾಗಲಿದೆ. ಕೆರೆ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಪಂಚಾಯಿತಿ ವಿವಿಧ ಮೂಲಗಳಿಂದ ಒಟ್ಟು ₹ 39 ಲಕ್ಷ ಅನುದಾನ ವಿನಿಯೋಗಿಸಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.