ಮಂಗಳೂರು: ನಗರದ ಹೊರವಲಯದಲ್ಲಿರುವ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ, ಮಂಗಳವಾರ ಹೆಜಮಾಡಿ ಟೋಲ್ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ.
ಟೋಲ್ ಗೇಟ್ ವಿರೋಧ ಹೋರಾಟ ಸಮಿತಿ, ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿ, ಸುರತ್ಕಲ್ ಟೋಲ್‌ಗೇಟ್ ತೆರವುಗೊಳಿಸಬೇಕು ಎಂದು ಘೋಷಣೆ ಕೂಗುತ್ತಿದ್ದಾರೆ.
ಹೆಜಮಾಡಿ ಟೋಲ್‌ಗೇಟ್ ನಿಂದ 9 ಕಿಮೀ ದೂರದಲ್ಲಿರುವ ಸುರತ್ಕಲ್ ಟೋಲ್ ಗೇಟ್‌ವರೆಗೆ ಈ ಪಾದಯಾತ್ರೆ ನಡೆಯಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮೆರವಣಿಗೆಯಲ್ಲಿ ಭಾಗಿಯಾಗಿವೆ.
ಕೇವಲ 9 ಕಿಮೀ ಅಂತರದಲ್ಲಿ ಸುರತ್ಕಲ್ ಮತ್ತು ಹೆಜಮಾಡಿ ಟೋಲ್‌ಗೇಟ್ ಗಳು ಇವೆ. ತಾತ್ಕಾಲಿಕ ನೆಲೆಯಲ್ಲಿ ಆರಂಭವಾಗಿದ್ದ ಸುರತ್ಕಲ್ ಟೋಲ್ ಗೇಟ್ ಇನ್ನೂ ಮುಂದುವರಿದಿದೆ. ಇದನ್ನು ಹೆಜಮಾಡಿ ಟೋಲ್‌ಗೇಟ್‌ನಲ್ಲಿ ವಿಲೀನಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.