ADVERTISEMENT

ಬಿಲ್ಲವ, ಈಡಿಗ, ನಾಮಧಾರಿಗಳ ಬೇಡಿಕೆ ಈಡೇರಿಕೆಗಾಗಿ ಪಾದಯಾತ್ರೆ ಆರಂಭ

ಪ್ರಣವಾನಂದ ಸ್ವಾಮೀಜಿ ನೇತೃತ್ವ; ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 20:50 IST
Last Updated 6 ಜನವರಿ 2023, 20:50 IST
ಬಿಲ್ಲವ, ಈಡಿಗ, ನಾಮಧಾರಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆರಂಭಿಸಲಾದ ಪಾದಯಾತ್ರೆಗೆ ಬಿ.ಜನಾರ್ದನ ಪೂಜಾರಿ ಹಾಗೂ ತೆಲಂಗಾಣದ ಸಚಿವ ವಿ. ಶ್ರೀನಿವಾಸ ಗೌಡ್‌ ಅವರು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ಚಾಲನೆ ನೀಡಿದರು. ಸಂಗಮಾನಂದ ಸ್ವಾಮೀಜಿ, ಪ್ರಣವಾನಂದ ಸ್ವಾಮೀಜಿ, ಕವಿತಾ ಸನಿಲ್‌, ಆರ್‌. ಪದ್ಮರಾಜ್‌, ಅರ್ಚನಾ ಜೈಸ್ವಾಲ್‌, ಸಮುದಾಯದ ಮುಖಂಡರು ಇದ್ದಾರೆ

ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಇಲ್ಲಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ
ದಿಂದ ಬೆಂಗಳೂರಿಗೆ ಪಾದಯಾತ್ರೆ ಶುಕ್ರವಾರ ಆರಂಭವಾಯಿತು.

ಸಮುದಾಯದ ಮುಖಂಡ ಬಿ.ಜನಾರ್ದನ ಪೂಜಾರಿ ಹಾಗೂ ತೆಲಂಗಾಣದ ಸಚಿವ ವಿ.ಶ್ರೀನಿವಾಸ ಗೌಡ ಪಾದಯಾತ್ರೆಗೆ ಚಾಲನೆ ನೀಡಿದರು.

41 ದಿನಗಳ ಪಾದಯಾತ್ರೆ ಒಟ್ಟು 658 ಕಿ.ಮೀ ಕ್ರಮಿಸಲಿದ್ದು, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.