ADVERTISEMENT

ಮರಳು ಕಳ್ಳಸಾಗಣೆ; ಲಾರಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 5:18 IST
Last Updated 18 ಆಗಸ್ಟ್ 2022, 5:18 IST

ಮಂಗಳೂರು: ಪಡೀಲ್‌ನಲ್ಲಿ ಅಕ್ರಮವಾಗಿ ಮರಳು ಕಳ್ಳಸಾಗಣೆ ಮಾಡುತ್ತಿದ್ದ ಮಿನಿ ಟಿಪ್ಪರ್‌ ಲಾರಿಯನ್ನು ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ.

ಕಂಕನಾಡಿ ನಗರ ಪೊಲೀಸ್‌ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಎಸ್.ಎಚ್. ಭಜಂತ್ರಿ ಅವರು ಪಡೀಲ್ ಬಳಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದಾಗ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಣ್ಣೂರು ಕಡೆಯಿಂದ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಪಡೀಲ್ ಮೇಲ್ಸೇತುವೆ ಬಳಿ ಮಿನಿ ಟಿಪ್ಪರ್ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಅದರಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದುದು ಕಂಡುಬಂದಿತ್ತು.

‘ವಾಹನ ಚಾಲಕ ಹಾಗೂ ಮಾಲೀಕ ಅಫಪುಲ್ಲಾ ಅಲಿಯಾಸ್‌ ಅಪ್ಪು ಅವರು ಯಾವುದೇ ಪರವಾನಗಿ ಪ‍ಡೆಯದೆ ಹಾಗೂಸರ್ಕಾರಕ್ಕೆ ರಾಜಧನ ಪಾವತಿಸದೆಯೇ ನದಿ ದಡದಿಂದ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದರು. ವಶಪಡಿಸಿಕೊಂಡ ಟಿಪ್ಪರ್ ಲಾರಿ ಹಾಗೂ ಅದರಲ್ಲಿದ್ದ ಮರಳಿನ ಅಂದಾಜು ಮೌಲ್ಯ ₹ 4.07 ಲಕ್ಷ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.