ADVERTISEMENT

ಮಂಗಳೂರು: ಡ್ರಗ್ಸ್ ಆರೋಪಿಗಳ ಪರೇಡ್

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 8:37 IST
Last Updated 7 ಸೆಪ್ಟೆಂಬರ್ 2020, 8:37 IST
   

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಬಳಕೆ ಜಾಲದ ಆರೋಪಿಗಳ ಪರೇಡ್ ಸೋಮವಾರ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆಯಿತು.

ಒಟ್ಟು180 ಮಂದಿ ಆರೋಪಿಗಳಿಗೆ ಪರೇಡ್ ಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಇದರಲ್ಲಿ 90 ಮಂದಿ ಹಾಜರಾಗಿದ್ದರು. ಇವರಲ್ಲಿ 6 ವಿದ್ಯಾರ್ಥಿಗಳಿದ್ದರು.

ಕಳೆದ ವರ್ಷ ಜಿಲ್ಲೆಯಲ್ಲಿ 4 ಮಂದಿ ಮೇಲೆ ಗೂಂಡಾ ಕಾಯ್ದೆ ಹಾಕುವಂತೆ ಪ್ರಸ್ತಾವ ಕಳುಹಿಸಲಾಗಿತ್ತು. ಇವರಲ್ಲಿ ಒಬ್ಬರ ಮೇಲೆ ಗೂಂಡಾ ಕಾಯಿದೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಆರೋಪಿಗಳಿಗೆ ಕಠಿಣ ಎಚ್ಚರಿಕೆ ನೀಡಿದ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಶ್, ದಂಧೆಯನ್ನು ಪುನರಾವರ್ತಿಸಿದರೆ ಆಸ್ತಿ ಮಟ್ಟ ಹಾಕುವುದಾಗಿ ತಿಳಿಸಿದರು.

ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ತನಿಖೆ ನಡೆಯುತ್ತಿರುವ ಕಾರಣ, ಡ್ರಗ್ಸ್ ಜಾಲದಲ್ಲಿ ಮಂಗಳೂರು ನಂಟಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ತಪಾಸಣೆ, ತನಿಖೆ, ಜಾಗೃತಿ ಕಾರ್ಯ ಗಳನ್ನು ತೀವ್ರ ಗೊಳಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.