ADVERTISEMENT

ಬೆಳ್ತಂಗಡಿ | ಪಾದಚಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 6:23 IST
Last Updated 2 ಡಿಸೆಂಬರ್ 2025, 6:23 IST
ಚಿತ್ರಾಗದನ್
ಚಿತ್ರಾಗದನ್   

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ತೂರು ಶಾಲಾ ಬಳಿ ಬೈಕೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಭಾನುವಾರ ಮೃತಪಟ್ಟಿದ್ದಾರೆ.

ಕುತ್ತೂರು ನಿವಾಸಿ ಚಿತ್ರಾಗದನ್ (57) ಮೃತಪಟ್ಟವರು. ನ.24ರಂದು ಕುತ್ತೂರು ಶಾಲೆ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯೋಗೀಶ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಅವಘಡ ನಡೆದಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT