ADVERTISEMENT

ಮಂಗಳೂರು: ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 14:03 IST
Last Updated 24 ಏಪ್ರಿಲ್ 2021, 14:03 IST
ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬೆಂಕಿ ‌ಅವಘಡ
ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬೆಂಕಿ ‌ಅವಘಡ   

ಮಂಗಳೂರು: ಇಲ್ಲಿನ ಬಜ್ಪೆ ಬಳಿ ಇರುವ ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಶನಿವಾರಬೆಂಕಿ ‌ಅವಘಡ ಸಂಭವಿಸಿದೆ.

ಇದು ನೂತವಾಗಿ ನಿರ್ಮಾಣಗೊಂಡ ಕಂಪನಿಯಾಗಿದ್ದು, ಇಲ್ಲಿನ ರಾಸಾಯನಿಕಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಸದ್ಯಕ್ಕೆ ಯಾವುದೇ ಸಾವು-ನೋವು ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಬಂದಿದ್ದು, ಕಾರ್ಯಾಚರಣೆ ನಡೆಸುತ್ತಿವೆ.

ADVERTISEMENT

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರಿಗೂ ಅಪಾಯ ಆಗಿಲ್ಲ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.