ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಪೆಟ್ರೋಲೆಟ್ ಕಂಪನಿಯ ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು ಮಾಡಿರುವ ಸಂಬಂಧಿ ಗೋಣಿಬೀಡು ಪೊಲೀಸರು ವಿಜಯ್ ಕುಮಾರ್ ಹಾಗೂ ಆತನ ಪುತ್ರ ಹರ್ಷ ಎಂಬುವರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಪೆಟ್ರೋಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲೆಟ್ ಕಂಪನಿಯ ವ್ಯವಸ್ಥಾಪಕರು ಗೋಣಿಬೀಡು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೂ ಶೋಧ ನಡೆಸುತ್ತಿದ್ದಾರೆ. ಪೆಟ್ರೋಲ್ ಸಾಗಣೆಗಾಗಿ ಬಳಸಲಾಗಿದ್ದ ವಾಹನ ಹಾಗೂ ಪೆಟ್ರೋಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.