ಮಂಗಳೂರು: ಮಾದಕ ವಸ್ತು ಮತ್ತು ಶಸ್ತ್ರಾಸ್ತ್ರ ಸಾಗಣೆಗೆ ಸಂಬಂಧಿಸಿ ಮಂಗಳೂರು ಪೊಲೀಸರು ಬಂಧಿಸಿರುವ ಆರೋಪಿಗಳು ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ. ಅವರು ಭಯೋತ್ಪಾದಕ ಚಟುವಟಿಕೆ ನಡೆಸುವ ಉದ್ದೇಶದಿಂದ ದುಷ್ಕೃತ್ಯದ ಸಂಚು ರೂಪಿಸುತ್ತಿದ್ದ ಸಾಧ್ಯತೆ ಇದ್ದು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಆರೋಪಿಗಳಿಂದ ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆ.ಜಿ.ಗಟ್ಟಲೆ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರಾವಳಿಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯವರು ಸಕ್ರಿಯವಾಗಿದ್ದು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ನಡೆಸಲು ಪ್ರಯತ್ನ ಮಾಡುತ್ತಿದ್ದಾರೆ. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ, ಅವರ ಪೂರ್ವಯೋಜಿತ ಕೃತ್ಯ ಬಯಲಿಗೆಳೆಯಲು ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪತ್ರಿಕಾ ಹೇಳಿಕೆಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.