ADVERTISEMENT

ಪ್ರಧಾನಿ ಭೇಟಿ: ಭದ್ರತೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 5:09 IST
Last Updated 26 ನವೆಂಬರ್ 2025, 5:09 IST
ಪ್ರಧಾನಿ ನರೇಂದ್ರ ಮೋದಿ ಭೇಟಿ ಪ್ರಯುಕ್ತ ಹಿರಿಯ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದರು
ಪ್ರಧಾನಿ ನರೇಂದ್ರ ಮೋದಿ ಭೇಟಿ ಪ್ರಯುಕ್ತ ಹಿರಿಯ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದರು   

ಮಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.28ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಉಡುಪಿಯತ್ತ ತೆರಳುವರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಇಲ್ಲಿ ನಡೆಯಿತು.

ನ.28ರಂದು ಬೆಳಿಗ್ಗೆ 8.15ಕ್ಕೆ ನವದೆಹಲಿಯಿಂದ ಹೊರಡುವ ಪ್ರಧಾನಿ 11.05 ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ ವಾಯುಪಡೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿ, ಅಲ್ಲಿನ ಕಾರ್ಯಕ್ರಮ ಮುಗಿಸಿ, ಮಧ್ಯಾಹ್ನ 2.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಗೋವಾಕ್ಕೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಧಾನಿ ಭೇಟಿ ಪ್ರಯುಕ್ತ ವಿಮಾನ ನಿಲ್ದಾಣದಲ್ಲಿ ಅತ್ಯುನ್ನತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಆಂಬುಲೆನ್ಸ್, ಅಗ್ನಿಶಾಮಕ ವಾಹನ ಸೇರಿದಂತೆ ಸೌಲಭ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಎಸ್.ಪಿ.ಜಿ ಅಧಿಕಾರಿಗಳು ಸೂಚಿಸಿದರು.

ADVERTISEMENT

ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ಉಡುಪಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಸುಸ್ಥಿತಿಯಲ್ಲಿ ಇಡಬೇಕು. ಅಗತ್ಯ ಬಂದಲ್ಲಿ ಬಳಸಲು ಸರ್ಕ್ಯೂಟ್‌ ಹೌಸ್ ಹಾಗೂ ಉನ್ನತ ಆಸ್ಪತ್ರೆಯನ್ನು ಸನ್ನದ್ಧವಾಗಿಡಲು ಸೂಚಿಸಲಾಯಿತು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಸಿಐಎಸ್‌ಎಫ್ ಪೊಲೀಸ್ ಅಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ರಾಜು, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ವಿಮಾನ ನಿಲ್ದಾಣದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.