ADVERTISEMENT

ಶ್ರಮ ಯೋಗಿ ಮಾನ್-ಧನ್ ಯೋಜನೆ: ದ.ಕ ಗುರಿ ಸಾಧನೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 16:20 IST
Last Updated 16 ಆಗಸ್ಟ್ 2022, 16:20 IST

ಮಂಗಳೂರು: ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ ದೇಶಾದ್ಯಂತ ಆಯ್ಕೆ ಮಾಡಲಾಗಿದ್ದ 75 ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಟಾಪ್ 12ರಲ್ಲಿ ಸ್ಥಾನ ಗಳಿಸಿದೆ.

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ 75 ಜಿಲ್ಲೆಗಳನ್ನು ಆಯ್ಕೆ ಮಾಡಿ, ಸೋಮವಾರ ಅಂತಿಮ ಗಡುವು ನೀಡಿತ್ತು. 75 ಜಿಲ್ಲೆಗಳ ಪೈಕಿ 12 ಜಿಲ್ಲೆಗಳು ಶೇಕಡಾ 100 ಗುರಿ ಸಾಧಿಸಿವೆ. ಜಿಲ್ಲಾಧಿಕಾರಿ ನಿರ್ದೇಶನದಂತೆ ಕೈಗೊಂಡ ಕ್ರಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯೂ ಶೇ 100 ಗುರಿ ಸಾಧಿಸಲು ಸಾಧ್ಯವಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ ತಿಳಿಸಿದ್ದಾರೆ.

19ರಂದು ಶ್ರೀಕೃಷ್ಣ ಜಯಂತಿ

ADVERTISEMENT

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಗರದ ಹಂಪನಕಟ್ಟೆಯ ಸರ್ಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ಆ.19ರಂದು ಬೆಳಿಗ್ಗೆ 10.30ಕ್ಕೆ ಶ್ರೀಕೃಷ್ಣ ಜಯಂತಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ನರಸಿಂಹ ಮೂರ್ತಿ ರಾವ್ ಶ್ರೀಕೃಷ್ಣ ಜಯಂತಿಯ ಸಂದೇಶ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.