ADVERTISEMENT

ಉಪ್ಪಿನಂಗಡಿ | ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಮೇ 2024, 16:02 IST
Last Updated 13 ಮೇ 2024, 16:02 IST

ಉಪ್ಪಿನಂಗಡಿ: ಬಾಲಕನಿಗೆ ವ್ಯಕ್ತಿಯೊಬ್ಬ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

ಬಂಟ್ವಾಳ ತಾಲ್ಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ಅಬ್ದುಲ್ಲಾ ಬಂಧಿತ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಮನೆಯಲ್ಲಿ ಕೆಲಸವಿದೆ’ ಎಂದು  ಬಾಲಕನನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ ಕುರಿತು ಆತನ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ 13ರ ಹರೆಯದ ಬಾಲಕ ಶಾಲೆಯಲ್ಲಿ ತಿಳಿಸಿದ್ದ. ಬಳಿಕ ಮಕ್ಕಳ ಸಹಾಯವಾಣಿಗೆ ಕರೆ ಮಾಡಿಯೂ ಮಾಹಿತಿ ನೀಡಿದ್ದ. ಸಹಾಯವಾಣಿ ಸಿಬ್ಬಂದಿಯ ಸಲಹೆಯಂತೆ ಬಾಲಕ, ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.