ADVERTISEMENT

ಅನುಮತಿ ಇಲ್ಲದೇ ಡ್ರೋನ್ ಬಳಸಿದರೆ ಕ್ರಮ: ಪೊಲೀಸ್‌ ಕಮಿಷನರ್‌ ಶಶಿಕುಮಾರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 2:44 IST
Last Updated 19 ಜನವರಿ 2021, 2:44 IST

ಮಂಗಳೂರು: ನಗರದಲ್ಲಿ ಅವ್ಯಾಹತವಾಗಿ ಡ್ರೋನ್‍ಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಯಾವುದೇ ಖಾಸಗಿ ಕಾರ್ಯಕ್ರಮಗಳಲ್ಲಿ ಡಿಜಿಸಿಎ ನಿಯಮ ಉಲ್ಲಂಸಿ ಡ್ರೋನ್ ಬಳಸಿದರೆ, ವಶಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಕಮಿಷನರ್‌ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಡ್ರೋಣ್ ಬಳಸುವವರು ಅಥವಾ ಡ್ರೋನ್ ಹೊಂದಿರುವವರು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ತಿಳಿಸಿದರು.

ಬಸ್ಸಿನಲ್ಲಿ ಯುವತಿಗೆ ಕಿರುಕುಳ ಪ್ರಕರಣ: ತನಿಖೆ ಮುಂದುವರಿಕೆ
ಬಸ್ಸಿನಲ್ಲಿ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ. ಈವರೆಗೂ ಆರೋಪಿಯ ಸುಳಿವು ದೊರಕಿಲ್ಲ. ಆತ ಮಲಯಾಳಂ ಮಾತನಾಡುತ್ತಿದ್ದ ಕಾರಣ ಕೇರಳ ಮೂಲದವ ಆಗಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.