ಮಂಗಳೂರು: ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಂಬಂಧಿಸಿ ಅ.18ರಂದು ತನಿಖಾಧಿಕಾರಿ ಎದುರು ವಿಚಾರಣೆಗೆ ಬರಲು ಸೂಚಿಸಿ ಸೌಜನ್ಯಾ ಪರ ಹೋರಾಟಗಾರ ಗಿರೀಶ ಮಟ್ಟೆಣ್ಣವರ ಅವರಿಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
‘ಬೆಂಗಳೂರಿನಲ್ಲಿರುವ ಮಟ್ಟೆಣ್ಣವರ ಮನೆಗೆ ಭೇಟಿ ನೀಡಿ, ನೋಟಿಸ್ ಜಾರಿಗೊಳಿಸಿದ್ದಾರೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ ವೇಳೆ, ಮಾಧ್ಯಮಗಳ ಜೊತೆ ಮಾತನಾಡಿದ್ದ ಗಿರೀಶ, ‘ತಿಮರೋಡಿ ಎಲ್ಲಿಯೂ ಪರಾರಿಯಾಗಿಲ್ಲ, ಅವರ ಜೊತೆ ಮಾತನಾಡಿದ್ದೇನೆ. ತಿಮರೋಡಿ ಅವರ ಪತ್ತೆ ಹಚ್ಚಲು ಪೊಲೀಸರಿಗೆ ಸಾಮರ್ಥ್ಯ ಇಲ್ಲ’ ಎಂದು ಟೀಕಿಸಿದ್ದರು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.