ಬಂಧನ (ಸಾಂದರ್ಭಿಕ ಚಿತ್ರ)
ಉಜಿರೆ: ವೇಶ್ಯವಾಟಿಕೆ ಚಟುವಟಿಕೆ ಶಂಕೆ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಖಾಸಗಿ ವಸತಿಗೃಹಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಜಿರೆಯ ಬಸ್‌ನಿಲ್ದಾಣದ ಬಳಿ ಇರುವ ಶ್ರೀದುರ್ಗಾ ವಸತಿಗೃಹದಲ್ಲಿ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವಸತಿಗೃಹದ ಮ್ಯಾನೇಜರ್ ಸತೀಶ್ ಪೂಜಾರಿ ಮತ್ತು ಕನ್ಯಾಡಿ ನಿವಾಸಿ ಯೋಗೀಶ್ ಆಚಾರ್ಯ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ವಸತಿಗೃಹದ ಮಾಲೀಕ ರಮೇಶ್ ಶೆಟ್ಟಿ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.