ಮಂಗಳೂರು: ವಿಧಾನ ಮಂಡಲದಿಂದ ಬರುವ ಜೂನ್‌ನಿಂದ ಬೆಂಗಳೂರಿನಲ್ಲಿ ರಾಜಕೀಯ ಪದವಿ ಕಾಲೇಜು ಪ್ರಾರಂಭಿಸಲು ಯೋಚಿಸಲಾಗಿದೆ ಎಂದು ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಮೂರು ವರ್ಷದ ಕೋರ್ಸ್‌ಗೆ ರಾಜಕೀಯ ಸಂಹಿತೆ ಒಳಗೊಂಡ ಪಠ್ಯಕ್ರಮ ರೂಪಿಸಲು ತಜ್ಞರನ್ನು ಸಂಪರ್ಕಿಸಲಾಗಿದೆ’ ಎಂದರು.
‘ಒಂದು ತಿಂಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಸ್ಪೀಕರ್ ಯು.ಟಿ.ಖಾದರ್ ಜೊತೆಗೂ ಚರ್ಚಿಸಿದ್ದು, ಮುಖ್ಯಮಂತ್ರಿ ಅವರು ಅನುದಾನ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.