ಬೆಳ್ತಂಗಡಿ: ಪ್ರಪಂಚದ ಆತ್ಮಸಾಕ್ಷಿಯಾಗಿ ನಿಲುವು ತೆಗೆದುಕೊಂಡಿದ್ದ ಪೋಪ್ ಫ್ರಾನ್ಸಿಸ್ ಅವರು ಸಮಾಜದಲ್ಲಿ ಕಡೆಗಣಿಸಲಾದವರಿಗಾಗಿ ಹೋರಾಡಿದ್ದರು ಎಂದು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯ ಸಂತಾಪ ವ್ಯಕ್ತಪಡಿಸಿದೆ.
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ, ‘ಪೋಪ್ ಫ್ರಾನ್ಸಿಸ್ ಅವರ ನಿಧನವು ಧರ್ಮಸಭೆ ಹಾಗೂ ಜಗತ್ತಿಗೂ ತುಂಬಲಾಗದ ನಷ್ಟವಾಗಿದೆ. ಪೋಪ್ ಫ್ರಾನ್ಸಿಸ್ ಅವರ ಶಾಂತಿ ಮತ್ತು ಕರುಣೆಯ ಸಂದೇಶ ಜಗತ್ತಿಗೆ ಸಮಾಧಾನವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.