ADVERTISEMENT

ಪ್ರತಿಷ್ಠಾ ಮಹೋತ್ಸವ ಆರಂಭ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 5:00 IST
Last Updated 29 ಡಿಸೆಂಬರ್ 2022, 5:00 IST
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಪಡಂಗಡಿಯಲ್ಲಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ ನಡೆಯಿತು
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಪಡಂಗಡಿಯಲ್ಲಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ ನಡೆಯಿತು   

ಉಜಿರೆ: ಸಮವಸರಣದ ಪ್ರತೀಕವಾದ ಜೈನರ ಶ್ರದ್ಧಾಕೇಂದ್ರಗಳಾದ ಬಸದಿಗಳು ಊರಿನ ಜನರ ಧರ್ಮ ಮತ್ತು ಸಂಸ್ಕೃತಿಯ ಪ್ರತೀಕವಾಗಿದ್ದು ಅವುಗಳ ಸಂರಕ್ಷಣೆ ಮತ್ತು ಸಾನ್ನಿಧ್ಯ ಕಾಪಾಡುವುದು ಊರಿನವರ ಹೊಣೆಗಾರಿಕೆಯಾಗಿದೆ ಎಂದು ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಅವರು ಬೆಳ್ತಂಗಡಿ ತಾಲ್ಲೂಕಿನ ಪಡಂಗಡಿ ಗ್ರಾಮದಲ್ಲಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ ಸಮಾರಂಭಕ್ಕೆ ಆಶೀರ್ವಚನ ನೀಡಿ ಶುಭ ಹಾರೈಸಿದರು.

ಎಲ್ಲಾ ಶ್ರಾವಕರು ನಿತ್ಯವೂ ಬಸದಿಗೆ ಹೋಗಿ ದೇವರ ದರ್ಶನ, ಪೂಜೆ ಮಾಡಿ ಜಪ, ತಪ, ಧ್ಯಾನ, ಸ್ವಾಧ್ಯಾಯದೊಂದಿಗೆ ಜೀವನ ಪಾವನ ಮಾಡಿಕೊಳ್ಳಬೇಕು. ಬಿಂಬವು ಪರಿಶುದ್ಧವಾಗಿದ್ದಾಗ ಪ್ರತಿ ಬಿಂಬವೂ ಪರಿಶುದ್ಧವಾಗಿರುತ್ತದೆ. ದೇವರ ದರ್ಶನದ ಮೂಲಕ ಆತ್ಮಾವ ಲೋಕನ ಮಾಡಿ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾ ತ್ಮನಾಗುತ್ತಾನೆ ಎಂದು ಸ್ವಾಮೀಜಿ ಹೇಳಿದರು.

ADVERTISEMENT

ಇಂದ್ರಪ್ರತಿಷ್ಠೆ, ತೋರಣಮು ಹೂರ್ತ, ವಿಮಾನಶುದ್ಧಿ, ನಾಂದಿ ಮಂಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ, ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ, ಶ್ರೀ ಪದ್ಮಾವತಿ ಅಮ್ಮನವರ ಪ್ರತಿಷ್ಠೆ, ೫೪ ಕಲಶ ಅಭಿಷೇಕ ಮತ್ತು ಮಹಾಪೂಜೆ ನಡೆಯಿತು.
ಧಾಮ ಸಂಪ್ರೋಕ್ಷಣಾ ಸಮಿತಿಯ ಅಧ್ಯಕ್ಷ ರತನ್ ಕುಮಾರ್, ಕಾರ್ಯದರ್ಶಿ ಅಮರನಾಥ ಹೆಗ್ಡೆ, ಪ್ರವೀಣ್ ಅಜ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.