ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 16:17 IST
Last Updated 16 ಆಗಸ್ಟ್ 2022, 16:17 IST
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು    

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಜ್ ಅಂಕತಡ್ಕ, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ, ಆ.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

ಆಗಸ್ಟ್ 11ರಂದು ಬಂಧಿಸಿದ್ದ ಇವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.