ಮಂಗಳೂರು: ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ ಅವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಸಲುವಾಗಿ ಬೆಳ್ಳಾರೆಯ ಭಾರಧ್ವಾಜ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಶೇಖರ ಪೂಜಾರಿ ಅವರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಕುಟುಂಬಕ್ಕೆ ಆಧಾರಸ್ತಂಭದಂತಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ.
ಇಸಿಜಿ ಮಾಡಿಸುವ ಸಲುವಾಗಿ ಶೇಖರ ಪೂಜಾರಿ ಅವರನ್ನು ಬೆಳ್ಳಾರೆಯ ಭಾರದ್ವಾಜ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಯಿತು
ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರು ನೆಟ್ಟಾರು ಗ್ರಾಮದಲ್ಲಿರುವ ಪ್ರವೀಣ್ ಅವರ ಮನೆಗೆ ಗುರುವಾರ ಭೇಟಿ ನೀಡಿದರು. ಅವರ ಜೊತೆ ನೋವು ತೋಡಿಕೊಳ್ಳುವಾಗ ಶೇಖರ ಅವರು ಮತ್ತಷ್ಟು ಆಘಾತಕ್ಕೊಳಗಾಗಿ ಕುಸಿದು ಬಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.