ಸುಳ್ಯ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆಯ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿನ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪಟ್ಟಣ ಕಾಂಗ್ರೆಸ್ ಸಮಿತಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮೊಕ್ತೇಸರ ಹರಪ್ರಸಾದ ತುದಿಯಡ್ಕ ಪ್ರಾರ್ಥನೆ, ಪೂಜೆ ನಡೆಸಿಕೊಟ್ಟರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಪಟ್ಟಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ, ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಕುಲ್‌ದಾಸ್ ಸುಳ್ಯ, ಧರ್ಮಪಾಲ ಕೊಯಿಂಗಾಜೆ, ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.