ADVERTISEMENT

ಮಂಗಳೂರು ಮಹಾನಗರ ಪಾಲಿಕೆ: ಪ್ರೇಮಾನಂದ ಶೆಟ್ಟಿ ಮೇಯರ್, ಸುಮಂಗಲಾ ರಾವ್‌ ಉಪಮೇಯರ್‌

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 8:41 IST
Last Updated 2 ಮಾರ್ಚ್ 2021, 8:41 IST
ಸುಮಂಗಲಾ ರಾವ್ ಹಾಗೂ ಪ್ರೇಮಾನಂದ ಶೆಟ್ಟಿ
ಸುಮಂಗಲಾ ರಾವ್ ಹಾಗೂ ಪ್ರೇಮಾನಂದ ಶೆಟ್ಟಿ   

ಮಂಗಳೂರು: ಮಂಗಳೂರುಮಹಾನಗರ ಪಾಲಿಕೆಯ 22 ನೇ ಮೇಯರ್‌ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್‌ ಆಗಿ ಸುಮಂಗಲಾ ರಾವ್‌ ಮಂಗಳವಾರ ಆಯ್ಕೆಯಾದರು.

ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ನ ಅನಿಲ್ ಕುಮಾರ್ ವಿರುದ್ದ ಬಿಜೆಪಿಯ ಪ್ರೇಮಾನಂದ ಶೆಟ್ಟಿ 46-14ಮತಗಳಿಂದ ಗೆಲುವು ಸಾಧಿಸಿದರು.

ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಜೆಸಿಂತಾ ವಿರುದ್ಧ ಸುಮಂಗಲಾ ರಾವ್‌ 46-14 ಮತಗಳಿಂದ ಗೆಲುವು ಸಾಧಿಸಿದರು.

ADVERTISEMENT

ಮಂಗಳಾದೇವಿ ವಾರ್ಡ್‌ನಿಂದ ಆಯ್ಕೆಯಾಗಿರುವ ಪ್ರೇಮಾನಂದ ಶೆಟ್ಟಿ, ಹಿರಿತನವನ್ನು ಪರಿಗಣಿಸಿ ಪಕ್ಷವು ಆಯ್ಕೆ ಮಾಡಿದೆ. ಅವರು 5 ನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸುಮಂಗಲಾ ರಾವ್‌ ಅವರು ಕುಂಜತ್ತ್‌ಬೈಲ್‌ ದಕ್ಷಿಣ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ.

ಮೇಯರ್‌ ಸ್ಥಾನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಉಪ ಮೇಯರ್‌ ಸ್ಥಾನವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ.

ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್‌ 14 ಹಾಗೂ ಎಸ್‌ಡಿಪಿಐ 2 ಸದಸ್ಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.