ಮಂಗಳೂರು: ನಗರಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಗುರುವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿ, ಪಾಲ್ಗೊಳ್ಳಲಿರುವ ಕಾರ್ಯಕ್ರಮದ ವಿವರ ನೀಡಿದ್ದಾರೆ.
‘ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. ₹ 3,800 ಕೋಟಿ ಮೊತ್ತದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.