ADVERTISEMENT

ಬೆಳ್ತಂಗಡಿ: ಬಸ್‌ -ಇನ್ನೋವಾ ಕಾರು ಅಪಘಾತ, ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 1 ಜನವರಿ 2023, 7:29 IST
Last Updated 1 ಜನವರಿ 2023, 7:29 IST
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ವಾಹನಗಳು
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ವಾಹನಗಳು   

ಬೆಳ್ತಂಗಡಿ (ದಕ್ಷಿಣ ಕನ್ನಡ): ತಾಲ್ಲೂಕಿನ ವೇಣೂರು ಸಮೀಪದ ಗರ್ಡಾಡಿ ಮೋಗೆರಡ್ಕ ಬಳಿ ಭಾನುವಾರ ಬೆಳಿಗ್ಗೆ ಇನೋವಾ ಕಾರು ಹಾಗೂ ಖಾಸಗಿ ಬಸ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಮೂಡುಬಿದಿರೆ ಗಂಜಿಮಠ ಸೂರಲ್ಪಾಡಿ ನಿವಾಸಿ ನೌಷದ್ (47) ಮತ್ತು ಕಾರು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್ (21) ಎಂದು ಗುರುತಿಸಲಾಗಿದೆ.

ಮೂಡುಬಿದಿರೆಯಿಂದ ಬೆಳ್ತಂಗಡಿ ಕಡೆಗೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದದ ತೀವ್ರತೆಗೆ ಕಾರಿನ ಮುಂಭಾಗ ಸಂಫೂರ್ಣ ನಜ್ಜುಗುಜ್ಜಾಗಿದ್ದು, ಗುರುತು ಸಿಗದಷ್ಟು ಹಾನಿಯಾಗಿದೆ.

ಬಸ್‌ನ ಚಾಲಕನ ಸೀಟಿನ ಬದಿಯಲ್ಲಿ ಸಂಪೂರ್ಣ ಜಖಂ ಆಗಿದೆ. ಚಾಲಕನ ಕೆಳಗಡೆಯ ಟಯರ್‌ ಕಳಚಿಕೊಂಡು ಹಿಂಬದಿಯ ಟಯರ್‌ ಬಳಿಗೆ ಸರಿದಿದೆ. ಅಲ್ಲಿಯವರೆಗೂ ಬಸ್ಸಿನ ಅಂಚಿಗೆ ಹಾನಿಯಾಗಿದೆ. ಅಲ್ಲದೇ ಚಾಲಕನ ಸೀಟಿನ ಮುಂಭಾಗಕ್ಕೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ತೆರಳಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.