ADVERTISEMENT

ಮಂಗಳೂರು: ಪ್ರೊಬೆಷನರಿ ಪಿಎಸ್‌ಐ ಶಾಮಿಲಿ ಕೋವಿಡ್‌ನಿಂದ ನಿಧನ

​ಪ್ರಜಾವಾಣಿ ವಾರ್ತೆ
Published 18 ಮೇ 2021, 7:43 IST
Last Updated 18 ಮೇ 2021, 7:43 IST
ಶಾಮಿಲಿ
ಶಾಮಿಲಿ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಾಮಿಲಿ(24) ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಈ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.

24 ವರ್ಷದ ಪ್ರೊಬೆಷನರಿ ಪಿಎಸ್‌ಐ ಶಾಮಿಲಿ ಕೋಲಾರದವರು. ಜನವರಿ 11 ರಂದು ಮಂಗಳೂರು ಎಸ್‌ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿದ್ದರು.

ಬಳಿಕ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಮೇ 2ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮುಂಜಾನೆ 4:30 ರ ಹೊತ್ತಿಗೆ ನಿಧನರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.