ADVERTISEMENT

ದೇವಿ ಶೋಭಾಯಾತ್ರೆ: ಬದಲಿ ಸಂಚಾರ ಮಾರ್ಗ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2022, 6:10 IST
Last Updated 4 ಅಕ್ಟೋಬರ್ 2022, 6:10 IST

ಮಂಗಳೂರು: ನಗರದ ಗೋಕರ್ಣನಾಥ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಸ್ತಬ್ಧಚಿತ್ರಗಳ ಶೋಭಾಯಾತ್ರೆಗೆ ಅಪಾರ ಜನ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಅ.5ರ ಮಧ್ಯಾಹ್ನ 2 ಗಂಟೆಯಿಂದ ಅ.6ರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ಕೊಟ್ಟಾರಚೌಕಿ ಜಂಕ್ಷನ್ ಮೂಲಕ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಿದ್ದು, ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ವಾಹನಗಳು ಪ್ರವೇಶಿಸಬೇಕು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮೂಲಕ ಕೊಟ್ಟಾರಚೌಕಿ ಕಡೆಗೆ, ಲಾಲ್‍ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್.ಆರ್ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್‍ನಿಂದ ಸಂಚರಿಸುವುದು.

ADVERTISEMENT

ನ್ಯೂ ಚಿತ್ರಾ ಜಂಕ್ಷನ್‍ನಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ನ್ಯೂ ಚಿತ್ರಾ ಜಂಕ್ಷನ್‍ನಿಂದ ಕಂಡತ್‍ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಣ, ಸುಲ್ತಾನ್‍ಬತ್ತೇರಿ ಮೂಲಕ ಉರ್ವ ಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‍ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್ ಮಾರ್ಗವಾಗಿ ಮುಂದುವರೆದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಉರ್ವಾಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರ ಕ್ರಾಸ್, ಕಾಪಿಕಾಡು, ಕೆ.ಎಸ್.ಆರ್.ಟಿ.ಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು. ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆ ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ ರಸ್ತೆಗೆ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ‘ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು. ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್‌ ನಿಲ್ದಾಣಕ್ಕೆ ಬಂದು ಹೋಗುವ ಎಲ್ಲ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪೈಕಿ ಪಂಪ್‍ವೆಲ್ ಕಡೆಗೆ ಸಂಚರಿಸುವ ಬಸ್‌ಗಳು ಕೆ.ಪಿ.ಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್‌ಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುವುದು. ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.