ADVERTISEMENT

ಕೇರಳದಿಂದ ಬರುವ ಕುಕ್ಕುಟ, ಕುಕ್ಕುಟ ಉತ್ಪನ್ನಕ್ಕೆ ನಿಷೇಧ: ಜಿಲ್ಲಾಧಿಕಾರಿ

ಹಕ್ಕಿಜ್ವರ: ಅಗತ್ಯ ಮುಂಜಾಗ್ರತೆ ವಹಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 8:10 IST
Last Updated 8 ಜನವರಿ 2021, 8:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಹಕ್ಕಿ ಜ್ವರ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚಿಸಿದರು.

ಪಕ್ಕದ ಕೇರಳದ ಕೊಟ್ಟಾಯಂ ಮತ್ತು ಅಲಾಪುಳ್ಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈ ರೋಗ ಹರಡುವ ಸಾಧ್ಯತೆ ಇದ್ದು, ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಗೆ ಕೇರಳ ರಾಜ್ಯದಿಂದ ಬರುವ ಎಲ್ಲಾ ರೀತಿಯ ಕುಕ್ಕುಟ ಮತ್ತು ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸಬೇಕು ಎಂದಿರುವ ಅವರು, ಕೇರಳ ರಾಜ್ಯಕ್ಕೆ ಜಿಲ್ಲೆಯಿಂದ ರವಾನಿಸುವ ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ವಾಹನಗಳನ್ನು ರಾಜ್ಯ ಮಟ್ಟದ ಗಡಿ ಭಾಗದಲ್ಲಿ ನಂಜು ನಾಶಕ ಔಷಧ ಸಿಂಪಡಿಸಬೇಕು ಎಂದರು.

ADVERTISEMENT

ಜಿಲ್ಲೆಯ ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು, ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲೀಕರು ಅಗತ್ಯ ಕ್ರಮ ವಹಿಸುವುದರ ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದರು.

ಆ ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗೆ ಪಶುಪಾಲನಾಧೀಕಾರಿಗಳು ಆಗ್ಗಿಂದ್ದಾಗೆ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.