ADVERTISEMENT

ಪುದು ಪಂಚಾಯಿತಿ ಎದುರು ಪ್ರತಿಭಟನೆ

ಪರಿಶಿಷ್ಟ ಜಾತಿ-ಪಂಗಡ ಅನುದಾನ ದುರ್ಬಳಕೆ ಆರೋಪ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 2:16 IST
Last Updated 20 ಸೆಪ್ಟೆಂಬರ್ 2022, 2:16 IST
ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮೋರ್ಚಾ ವತಿಯಿಮದ ಸೋಮವಾರ ಪ್ರತಿಭಟನೆ ನಡೆಯಿತು.
ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮೋರ್ಚಾ ವತಿಯಿಮದ ಸೋಮವಾರ ಪ್ರತಿಭಟನೆ ನಡೆಯಿತು.   

ಬಂಟ್ವಾಳ: ಇಲ್ಲಿನ ಪುದು ಗ್ರಾಮ ಪಂಚಾ ಯಿತಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿಗೆ ಬಂದಿರುವ ಸರ್ಕಾರದ ಅನುದಾನ ದುರ್ಬಳಕೆಯಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ಸತೀಶ್ ಕುಂಪಲ ಆರೋಪಿಸಿದರು.

ಇಲ್ಲಿನ ಪುದು ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮೋರ್ಚಾ ವತಿಯಿಂದ ಸೋಮವಾರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಮಂಗಳೂರು ಮಂಡಲ ಉಪಾಧ್ಯಕ್ಷ ವಿಠಲ್ ಸಾಲ್ಯಾನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕ ಅಧ್ಯಕ್ಷ ವಿನಯನೇತ್ರ ಮಾತನಾಡಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್, ಕೋಶಾಧಿಕಾರಿ ಪ್ರಕಾಶ್ ಸಿಂಪೋನಿ, ಮೇರಮಜಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಕರ್ಕೇರ, ಪ್ರಮುಖರಾದ ಹೇಮಂತ್ ಶೆಟ್ಟಿ, ಮನೋಜ್ ಆಚಾರ್ಯ ನಾಣ್ಯ, ಪ್ರವೀಣ್ ಶೆಟ್ಟಿ ಸುಜೀರು, ದಿನೇಶ್ ಶೆಟ್ಟಿ ಕೊಟ್ಟಿಂಜ, ಸತೀಶ್ ನಾಯ್ಕ, ಮನೋಜ್ ಕುಮಾರ್, ಸಂದೇಶ್, ವರುಣ್ ರಾಜ್, ಆನಂದ ಪಾಂಗಾಳ್, ರಮೇಶ್ ಕುದ್ರೆಬೆಟ್ಟು, ಜಯಚಂದ್ರ, ಸುಬ್ರಹ್ಮಣ್ಯ ರಾವ್, ಪದ್ಮನಾಭ ಶೆಟ್ಟಿ ಪುಂಚಮೆ, ಸಂತೋಷ್ ನೆತ್ತರಕೆರೆ, ಆಶಾ ನಯನ, ಜಯಂತಿ, ಸರೋಜಿನಿ, ಭಾಸ್ಕರ ಚೌಟ ಕುಮುಡೇಲು, ಸೋಮಪ್ಪ ಕೋಟ್ಯಾನ್, ವೆಂಕಪ್ಪ ಗುರಿಕಾರ, ಗಿರಿಯಪ್ಪ ಕುಂಭ್ಡೇಲು, ಸೋಮನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.