ADVERTISEMENT

ಎನ್‌ಇಪಿಗೆ ವಿರೋಧಿಸಿ ಮಂಗಳೂರು ವಿವಿ ಮುತ್ತಿಗೆ ಯತ್ನ

ಸಿಎಫ್ಐ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 8:38 IST
Last Updated 30 ಆಗಸ್ಟ್ 2021, 8:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ಅವರ ಕಾರ್ಯಕ್ರಮಕ್ಕೆ ‌ಮುತ್ತಿಗೆ ಹಾಕಲು ಯತ್ನಿಸಿದ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರನ್ನು‌ ಪೊಲೀಸರು ವಶಕ್ಕೆ ಪಡೆದರು.

ಕೊಣಾಜೆಯ ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕಾರ್ಯಕರ್ತರ ಪ್ರತಿಭಟನೆ ಮಾಡಲು ಯತ್ನಿಸಿದರು.

ಕೂಡಲೇ ಮಧ್ಯೆ ಪ್ರವೇಶಿಸಿ, ಕಾರ್ಯಕರ್ತರನ್ನು ವಶಕ್ಕೆ ಪಡೆದರು.ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದುದರಿಂದ ವಿವಿ ಅವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.