ADVERTISEMENT

ಸಿಎಎ, ಎನ್ಆರ್‌ಸಿ ಹೋರಾಟದ ವೇಳೆ ಪೊಲೀಸರ ವಿರುದ್ಧ ಮಾನಹಾನಿ ಸಂದೇಶ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 2:42 IST
Last Updated 8 ಜುಲೈ 2021, 2:42 IST
ಯೋಗೇಶ್ ಎಸ್.
ಯೋಗೇಶ್ ಎಸ್.   

ಮಂಗಳೂರು: ಸಿಎಎ, ಎನ್ಆರ್‌ಸಿ ಕಾಯ್ದೆ ವಿರೋಧಿಸಿ 2019ರಲ್ಲಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕುಂದಿಸುವ ಮತ್ತು ಪೊಲೀಸ್ ಕುಟುಂಬದ ಮಾನಹಾನಿ ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿ ಗ್ರಾಮದ ಯೋಗಿ ಯಾನೆ ಯೋಗೇಶ್ ಯಾನೆ ಯೋಗೇಶ್ ಎಸ್. ಬಂಧಿತ ಆರೋಪಿ. ಈತನನ್ನು ಮಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಯೋಗೀಶ್, ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಪೊಲೀಸರ ವಿರುದ್ಧ ಬರೆಯುತ್ತಿದ್ದ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎರಡೂವರೆ ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.