ADVERTISEMENT

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಪಿಯು ಸಾಧಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 12:59 IST
Last Updated 12 ಏಪ್ರಿಲ್ 2025, 12:59 IST
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ಪುತ್ತೂರು: ಈ ಬಾರಿಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿವಿಧ ಕಾಲೇಜಿನ ವಿದ್ಯಾರ್ಥಿಗಳನ್ನು ಪುತ್ತೂರಿನ ವಿವೇಕಾನಂದ ಸ್ವಾಯತ್ತ ಕಾಲೇಜಿನಲ್ಲಿ ಗೌರವಿಸಲಾಯಿತು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಶ್ರೀರಕ್ಷಾ (ವಿಜ್ಞಾನ), ದೀಕ್ಷಾ ಜೋಗಿ (ವಾಣಿಜ್ಯ), ಮುಂಡಾಜೆ ಪದವಿಪೂರ್ವ ಕಾಲೇಜಿನ ಕೆ.ಎನ್.ಧನುಷ್ (ಕಲಾವಿಭಾಗ), ಎಂ.ಎಚ್.ಅನ್ವಿತಾ (ವಾಣಿಜ್ಯ), ಕಲ್ಲಡ್ಕ ಪದವಿಪೂರ್ವ ಕಾಲೇಜಿನ ಆಶಿಕಾ (ವಿಜ್ಞಾನ), ಪ್ರಜ್ಞಾ (ವಾಣಿಜ್ಯ), ಮಾನಸ ಬಾಳಿಗ (ಕಲಾ), ಉಪ್ಪಿನಂಗಡಿಯ ಇಂದ್ರಪ್ರಸ್ಥ ಕಾಲೇಜಿನ ಪ್ರಾಪ್ತಿ (ವಿಜ್ಞಾನ) ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳೀಕೃಷ್ಣ ಕೆ.ಎನ್., ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್, ಉಪಪ್ರಾಂಶುಪಾಲ ಪ್ರೊ.ಶಿವಪ್ರಸಾದ್ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.