ADVERTISEMENT

ಪುತ್ತೂರು: ಹೃದಯಾಘಾತದಿಂದ ಪಿಯು ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2021, 5:40 IST
Last Updated 23 ಮಾರ್ಚ್ 2021, 5:40 IST
ಶ್ರೇಯಾ ಪಕ್ಕಳ
ಶ್ರೇಯಾ ಪಕ್ಕಳ    

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಓದುತ್ತಿದ್ದ ಬೆಳ್ಳಿಪ್ಪಾಡಿಯ ಶ್ರೇಯಾ ಪಕ್ಕಳ (16) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿದ್ದಾಳೆ.

ಆರೋಗ್ಯವಾಗಿದ್ದ ಶ್ರೇಯಾಳಿಗೆ ಏಕಾಏಕಿ ಮಂಗಳವಾರ ಬೆಳಿಗ್ಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿಗಿತ್ತು. ಅಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.