ADVERTISEMENT

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ದಕ್ಷಿಣ ಕನ್ನಡ ದ್ವಿತೀಯ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 7:53 IST
Last Updated 8 ಏಪ್ರಿಲ್ 2025, 7:53 IST
   

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ ಪ್ರಥಮ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ದ್ವಿತೀಯ ಸ್ಥಾನಕ್ಕೆ ಇಳಿದಿದೆ. ಜಿಲ್ಲೆಯ ಒಟ್ಟು ಫಲಿತಾಂಶ ಶೇ 93.57ರಷ್ಟು ದಾಖಲಾಗಿದೆ.

21-22ನೇ ಸಾಲಿನಿಂದ ಸತತವಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಪ್ರಥಮ‌ ಸ್ಥಾನ ಕಾಯ್ದುಕೊಂಡಿತ್ತು. 2021-22ನೇ ಸಾಲಿನಲ್ಲಿ ಶೇ 88.02 ಫಲಿತಾಂಶ, 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ 95.33 ಫಲಿತಾಂಶ, 2023–34ರಲ್ಲಿ ಶೇ 97.37 ಫಲಿತಾಂಶ ದಾಖಲಾಗಿತ್ತು.

ಒಟ್ಟಾರೆ ಫಲಿತಾಂಶದಲ್ಲಿ ಈ ಬಾರಿ ಇಳಿಕೆಯಾಗಿದೆ.

ADVERTISEMENT

‘ಈ ಬಾರಿ ಇಲಾಖೆ ನಿರ್ದೇಶನದಂತೆ ತಾಲ್ಲೂಕು ಮಟ್ಟದ ಶೈಕ್ಷಣಿಕ ಸಮಿತಿ ರಚನೆ ಮಾಡಿ, ಪಿಯು ಕಾಲೇಜುಗಳಿಗೆ ಭೇಟಿ ಮಾಡಿ ಫಲಿತಾಂಶದ ವಿಶ್ಲೇಷಣೆಯನ್ನು ಪರಿಣಾಮಕಾರಿಯಾಗಿ ನಡೆಸಲಾಗಿತ್ತು. ಘಟಕ ಪರೀಕ್ಷೆಗಳು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆ ಕಡ್ಡಾಯಗೊಳಿಸಿದ್ದೆವು. ಸರ್ಕಾರಿ ಕಾಲೇಜುಗಳ ಜೊತೆಗೆ ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳು ಉತ್ತಮ ಫಲಿತಾಂಶಕ್ಕಾಗಿ ವಿಶೇಷ ಮುತುವರ್ಜಿವಹಿಸಿದ್ದವು. ಒಟ್ಟಾರೆ, ಕೂಡುಶ್ರಮದಿಂದ ಉತ್ತಮ ಫಲಿತಾಂಶ ಸಾಧ್ಯವಾಗಿದೆ’ ಎಂದು ಪ್ರಭಾರಿ ಡಿಡಿಪಿಯು ಶ್ರೀಧರ್ ಎಚ್‌.ಜಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.