ADVERTISEMENT

ಮಂಗಳೂರು | ಅಮುಕ್ತ್ ಅಧ್ಯಕ್ಷರಾಗಿ ಪುರುಷೋತ್ತಮ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:38 IST
Last Updated 24 ಫೆಬ್ರುವರಿ 2026, 7:38 IST
ಪುರುಷೋತ್ತಮ ಕೆ.ವಿ.
ಪುರುಷೋತ್ತಮ ಕೆ.ವಿ.   

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಪೊಂಪೈ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ಕೆ.ವಿ. ಆಯ್ಕೆಯಾಗಿದ್ದಾರೆ.

ಅಮುಕ್ತ್‌ನ ಅಧ್ಯಕ್ಷರಾದ ಎಸ್.ಎ.ಮಂಜುನಾಥ ಅಧ್ಯಕ್ಷತೆಯಲ್ಲಿ ನಗರದ ಕೆನರಾ ಕಾಲೇಜಿನಲ್ಲಿ ಈಚೆಗೆ ನಡೆದ ಸಂಘಟನೆಯ 39ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.  

ಇತರ ಪದಾಧಿಕಾರಿಗಳು: ಉಪಾಧ್ಯಕ್ಷರು: ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸವಿತಾ; ಟ್ರಸ್ಟಿ: ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಕಾಶ ಕ್ರಮಧಾರಿ, ಟ್ರಸ್ಟಿನ ಸದಸ್ಯರು: ಶಿರ್ವದ ಎಂಎಸ್ಆರ್‌ಎಸ್ ಕಾಲೇಜಿನ ಸೋನ, ಪುತ್ತೂರಿನ ಸೇಂಟ್‌ ಫಿಲೋಮಿನಾ ಕಾಲೇಜಿನ ವಾಸುದೇವ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.