
ಪ್ರಜಾವಾಣಿ ವಾರ್ತೆ
ಪುತ್ತೂರು: ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದು ಪುತ್ತೂರು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.
15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ನೀಡಲಾದ ದೂರಿಗೆ ಸಂಬಂಧಿಸಿ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಆರೋಪಿ ತಂದೆಯ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.