ADVERTISEMENT

ಪುತ್ತೂರಿನಲ್ಲಿ ಮೊದಲ ಪೂಡಾ ಅದಾಲತ್ 

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 7:49 IST
Last Updated 25 ಸೆಪ್ಟೆಂಬರ್ 2025, 7:49 IST

ಪುತ್ತೂರು: ಕಡಬ ಮತ್ತು ಪುತ್ತೂರು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯಿತಿಗಳ ಏಕ ನಿವೇಶನ ಗೊಂದಲ ನಿವಾರಣೆ ಹಾಗೂ 4ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವ ಸಂಬಂಧ ಸೆ.30ರಂದು ಯೋಜನಾ ಪ್ರಾಧಿಕಾರದ ಅದಾಲತ್ ನಡೆಯಲಿದೆ ಎಂದು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಅದಾಲತ್ ನಡೆಯಲಿದ್ದು ಪುತ್ತೂರು ಮತ್ತು ಕಡಬ ತಾಲ್ಲೂಕಿನ ಒಟ್ಟು 558 ಪ್ರಕರಣಗಳ ಇತ್ಯರ್ಥ ಅದಾಲತ್‌ನಲ್ಲಿ ನಡೆಯಲಿದೆ. ಇದು ಮೊದಲ ಅದಾಲತ್ ಎಂದರು.

ಸದಸ್ಯ ಕಾರ್ಯದರ್ಶಿ ಗುರುಪ್ರಸಾದ್, ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಅನ್ವರ್ ಖಾಸಿಂ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.