ADVERTISEMENT

ಪುತ್ತೂರು: ಗಣೇಶೋತ್ಸವ ಸಂದರ್ಭ ಹಿಂದೂ ಜಾಗರಣ ವೇದಿಕೆ ಮುಖಂಡನ ಕೊಲೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 5:47 IST
Last Updated 4 ಸೆಪ್ಟೆಂಬರ್ 2019, 5:47 IST
   

ಮಂಗಳೂರು: ಗಣೇಶೋತ್ಸವಕಾರ್ಯಕ್ರಮಸಂದರ್ಭದಲ್ಲಿ ಯುವಕನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಹಿಂದೂ ಜಾಗರಣ ವೇದಿಕೆಯ ತಾಲ್ಲೂಕು ಘಟಕದ ಕಾರ್ಯದರ್ಶಿ ಕಾರ್ತಿಕ್ ಮೇರ್ಲ (30) ಕೊಲೆಯಾದ ಯುವಕ.

ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬುವವರು ಕಾರ್ತಿಕ್‌ಗೆ ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಾರ್ತಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕಾರ್ತಿಕ್ ಮೇರ್ಲ

ಘಟನೆ ನಡೆದ ಬಳಿಕ ಸಂಪ್ಯ ಗಣೇಶೋತ್ಸವದ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣಗೊಂಡಿತ್ತು. ಕೊಲೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.‌ ಆದರೆ ಹಳೆ ದ್ವೇಷವೇ ಕಾರಣ ಎಂಬ ಮಾತುಗಳು ಕೇಳಿಬಂದಿದೆ. ಸಂಪ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.